ಕಲ್ಲು ಗಣಿಗಾರಿಕಾ ಕ್ರಷರ್ ಪರವಾನಿಗೆ, ಸಮಸ್ಯೆಗಳ ಕುರಿತು ‌ಚರ್ಚೆ:  ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ, ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿ

ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇರುವ ಕಲ್ಲು ಗಣಿಗಾರಿಕಾ ಕ್ರಷರ್ ಗಳ ಪರವಾನಿಗೆ ಮತ್ತು ಇನ್ನಿತರ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಸಚೇತಕ, ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಅವರ ನೇತ್ರತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

error: Content is protected !!