ಕ್ರೀಡೆಯಲ್ಲಿ‌ ಸಾಧನೆ ಮೆರೆದರೆ ಔದ್ಯೋಗಿಕ ರಂಗಕ್ಕೂ ಸಹಕಾರಿ: ಶಶಿಧರ ಶೆಟ್ಟಿ ಉಜಿರೆಯಲ್ಲಿ ಪಿ.ಯು. ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ವಾಲಿಬಾಲ್ ಕ್ರೀಡಾಕೂಟಕ್ಕೆ ಚಾಲನೆ

 

ಉಜಿರೆ: ಪ್ರಸ್ತುತ ಸಂದರ್ಭದಲ್ಲಿ ದೇಶದೆಲ್ಲೆಡೆ ಕ್ರೀಡೆಗಳಿಗೆ ಹೆಚ್ಚು ಪ್ರೋತ್ಸಾಹ ಲಭಿಸುತ್ತಿದ್ದು, ಹೆಚ್ಚು ಅವಕಾಶಗಳೂ ದೊರೆಯುತ್ತಿದೆ. ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮೆರೆದರೆ ವಿವಿಧ ರೀತಿಯಲ್ಲಿ ಕ್ರೀಡಾಪಟುಗಳಿಗೂ ಸಹಾಯವಾಗುತ್ತದೆ. ಮುಖ್ಯವಾಗಿ ಔದ್ಯೋಗಿಕ ರಂಗ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಅವಕಾಶಗಳು ಲಭಿಸುತ್ತಿದೆ. ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿ ಮೆರೆಯಬೇಕು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ತಿಳಿಸಿದರು.

ಅವರು ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ದ.ಕ. ಜಿಲ್ಲೆ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್.ಡಿ.ಎಂ. ಪಿ.ಯು. ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‌ಪಿ.ಯು. ಮಟ್ಟದ ಬಾಲಕ, ಬಾಲಕಿಯರ ‌ಕ್ರೀಡಾಕೂಟ ಉದ್ಘಾಟಿಸಿ ‌ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಪಿ.ಯು. ಕಾಲೇಜು ಪ್ರಾಂಶುಪಾಲ ಪ್ರೊ.ದಿನೇಶ್ ಚೌಟ ಮಾತನಾಡಿ, ಎಲ್ಲ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಕ್ರೀಡಾಕೂಟಕ್ಕೆ ಆಗಮಿಸಿದ್ದು, ಎಲ್ಲರಿಗೂ ಸ್ಮರಣೀಯ ‌ಕ್ರೀಡಾಕೂಟವಾಗಲಿ ಎಂದು ಶುಭಹಾರೈಸಿದರು.

ಎಸ್. ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಹೆಚ್. ಉಪಸ್ಥಿತರಿದ್ದರು. ಎಸ್.ಡಿ.ಎಂ. ಪಿ.ಯು. ಕಾಲೇಜು ಉಪಪ್ರಾಂಶುಪಾಲ ಪ್ರಮೋದ್ ಕುಮಾರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಸಂದೇಶ್ ಪೂಂಜ ವಂದಿಸಿದರು. ಉಪನ್ಯಾಸಕ ಮಹಾವೀರ ಜೈನ್ ನಿರೂಪಿಸಿದರು.

error: Content is protected !!