ಬೆಳ್ತಂಗಡಿಯಲ್ಲಿ ಚಿಟ್ಟೆ ಪಾರ್ಕ್!?: ಬನ್ನೇರುಘಟ್ಟ ಚಿಟ್ಟೆ ಉದ್ಯಾನವನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

ಬೆಂಗಳೂರು: ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ ಎನ್ನಲಾಗಿದ್ದು ಶಾಸಕರು‌ ಈ ಬಗ್ಗೆ ತಮ್ಮ ಅಧಿಕೃತ ಫೇಸ್ಬುಕ್ ಅಕೌಂಟ್ ನಲ್ಲಿ‌ ಮಾಹಿತಿ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ. ಈ ಮೂಲಕ ಶೀಘ್ರದಲ್ಲೇ ಬೆಳ್ತಂಗಡಿಯಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸುವ ಕುರಿತು ಶಾಸಕರು ಸುಳಿವು ನೀಡಿದ್ದಾರೆ.

ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಇಂದು ಬೆಂಗಳೂರಿನಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿರುವ ಚಿಟ್ಟೆ ಪಾರ್ಕ್ ಗೆ ಬೇಟಿ ನೀಡಿ ಮಾಹಿತಿ ಪಡೆದುಕೊಳ್ಳಲಾಯಿತು ಎಂದು ಬರೆದುಕೊಂಡಿದ್ದಾರೆ.

error: Content is protected !!