ಡಿ.ಸಿ. ಆದೇಶ ಕುರಿತು ಸಚಿವ ಕೋಟ ಸ್ಪಷ್ಟನೆ:  ಕೋವಿಡ್-19 ನಿಯಮ ಪಾಲನೆಯೊಂದಿಗೆ ಸಾಂಪ್ರದಾಯಿಕ, ಧಾರ್ಮಿಕ ಕಾರ್ಯಕ್ರಮ ನಡೆಸಲು ಸಲಹೆ: ಮರು ಸ್ಪಷ್ಟನೆ ನೀಡಲು ದ.ಕ. ಜಿಲ್ಲಾಧಿಕಾರಿಗೆ ಸೂಚನೆ!

ಬೆಳ್ತಂಗಡಿ: ಕೋವಿಡ್-19 ಪರಿಣಾಮಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಸ್ಪಷ್ಟನೆ ನೀಡಲು ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಹೇಳಿಕೆ ಇರುವ ಪತ್ರಿಕಾ ಪ್ರಕಟನೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಈ ಪ್ರಕಟಣೆಯಲ್ಲಿ ಈಗಾಗಲೇ ಹಮ್ಮಿಕೊಂಡಿರುವ ಯಕ್ಷಗಾನ, ಕೋಲ, ನೇಮ, ಪೂಜೆ, ಪುನಸ್ಕಾರಗಳು ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೊವಿಡ್-19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಮಂತ್ರಿ ಕೋಟ ಸ್ಪಷ್ಟನೆ ನೀಡಿದ್ದಾರೆ.

ಬಯಲು/ಮೈದಾನ ಪ್ರದೇಶದಲ್ಲಿ ಗರಿಷ್ಟ 500 ಜನಕ್ಕಿಂತ ಜಾಸ್ತಿ ಸೇರುವಂತಿಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಜವಾಬ್ದಾರಿಯಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ಕೋಟಾ ಶ್ರೀನಿವಾಸ ಪೂಜಾರಿರವರು ಈಗಾಗಲೇ ನಿಗದಿಪಡಿಸಿರುವ ನೇಮೋತ್ಸವ, ಯಕ್ಷಗಾನ, ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸುವಂತೆ ದ.ಕ. ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

error: Content is protected !!