ಬೆಳ್ತಂಗಡಿ: ಅರ್ಥಶಾಸ್ರ್ತ ಉಪನ್ಯಾಸಕಿ ವಾಸಂತಿ ಎಂ.ಕೆ ಇವರು ಮಂಡಿಸಿರುವ “ಇನ್‍ಕ್ಲೂಸಿವ್ ಗ್ರೋತ್ : ಎ ಕೇಸ್ ಸ್ಟಡಿ ಆಫ್ ಮೈಕ್ರೋ ಫೈನಾನ್ಸ್ ಇನ್ ಚಿಕ್ಕಮಗಳೂರು ಡಿಸ್ಟ್ರಿಕ್ಟ್ . ಎಂಬ ಮಹಾಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಿದೆ.
ಇವರು ತುಮಕೂರು ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಎ.ಜಯಕುಮಾರ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಈ ಮಹಾ ಪ್ರಬಂಧವನ್ನು ಮಂಡಿಸಿದ್ದರು.
ಇವರು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಕಡೇಮಾಡ್ಕಲ್ ಗ್ರಾಮದ ಶ್ರೀಮತಿ ದೇವಕಿ ಮತ್ತು ಹೆಚ್.ಯು. ಕೃಷ್ಣಮೂರ್ತಿಯವರ ಪುತ್ರಿಯಾಗಿದ್ದಾರೆ. ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದು, ಪ್ರಸ್ತುತ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಅರ್ಥಶಾಸ್ತ್ರ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.