ಸಬಿತಾ ಮೋನಿಸ್: ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ನಿವಾಸಿ ಸಬಿತಾ ಮೋನಿಸ್‌ರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ 2021 ರ ರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ, ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಸರ್ಕಾರದ ಮಾಜಿ ಪ್ರಧಾನ ಕಾರ್ಯದರ್ಶಿ ಕೆ. ರತ್ನಪ್ರಭಾ, ಸಿನೆಮಾ ನಟಿ ಪ್ರಣೀತಾ ಮೊದಲಾದವರು ಸಮಾರಂಭದಲ್ಲಿ ಭಾಗವಹಿಸಿ ಸಬಿತಾ ಮೋನಿಸ್‌ರನ್ನು ಅಭಿನಂದಿಸಿದರು.

ಸಬಿತಾ ಮೋನಿಸ್ ಪ್ರಸ್ತುತ ಮೂಡಬಿದ್ರೆಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಕ್ಷೇಮ ಪಾಲನಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

error: Content is protected !!