ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ್ ಶೆಟ್ಟಿ ಮನೆಗೆ ಕಂದಾಯ ಸಚಿವ ಆರ್. ಅಶೋಕ್ ಭೇಟಿ

ಗುರುವಾಯನಕೆರೆ: ಕಂದಾಯ ಸಚಿವ ಆರ್. ಅಶೋಕ್ ದಂಪತಿಗಳು ಬರೋಡಾ ತುಳು ಸಂಘದ ಅಧ್ಯಕ್ಷ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಮನೆಗೆ ಭೇಟಿ ನೀಡಿದರು.

ಅವರು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ತಾಲೂಕಿನ ಅರ್ಹ ಫಲಾನುಭವಿಗಳಿಗೆ 94c ಹಕ್ಕು ಪತ್ರ ವಿತರಣೆ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಗುರುವಾಯನಕೆರೆಯ ನವಶಕ್ತಿ ಮನೆಗೆ ಭೇಟಿ ನೀಡಿದರು.

ಸಚಿವರನ್ನು ಶಶಿಧರ್ ಶೆಟ್ಟಿ, ರಾಜೇಶ್ ಶೆಟ್ಟಿ ಹಾಗೂ ಮನೆಯವರು ಆತ್ಮೀಯವಾಗಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಮುಖರಾದ ಸದಾನಂದ ಪೂಜಾರಿ ಉಂಗಿಲ ಬೈಲು, ಲಾಯ್ಲ ಗ್ರಾ.ಪಂ ಉಪಾಧ್ಯಕ್ಷ ಗಣೇಶ್, ಅಜಿತ್ ಶೆಟ್ಟಿ ಕೋರ್ಯರ್, ಪ್ರಶಾಂತ್ ಕರಂಬಾರ್ ,ಶಶಿರಾಜ್ ಶೆಟ್ಟಿ, ಬಂದಾರ್ ಗ್ರಾ.ಪಂ ಸದಸ್ಯ ಬಾಲಕೃಷ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

error: Content is protected !!