ಬೆಳ್ತಂಗಡಿ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯೊಬ್ಬರ ಬ್ಯಾಗನ್ನು ಕಳವು ಮಾಡಿ ಅದರಲ್ಲಿದ್ದ ಚಿನ್ನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ.
ಕಳೆದ ಎ 01 ಉತ್ತರಕನ್ನಡ ಜಿಲ್ಲೆ ಶಿರಸಿಯ ಚಿಪಗಿ ಎಂಬಲ್ಲಿಯ ಕಲ್ಪನಾ ಎಂಬವರು ಕುಟುಂಬಿಕರೊಂದಿಗೆ ಧರ್ಮಸ್ಥಳ ದೇವಸ್ಥಾನಕ್ಕೆ ಬಂದ ಸಂದರ್ಭದಲ್ಲಿ ಅವರ ತಾಯಿ ಭವಾನಿ ಹಿಡಿದುಕೊಂಡಿದ್ದ ವ್ಯಾನಿಟಿ ಬ್ಯಾಗ್ ಹಾಗೂ ಅದರಲ್ಲಿದ್ದ ಸುಮಾರು 3,20,000 ಮೌಲ್ಯದ 85 ಗ್ರಾಂ ಚಿನ್ನ ಕಳ್ಳತನವಾಗಿತ್ತು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಪ್ರಕರಣವನ್ನು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವನೆ ನಿರ್ದೆಶನದಂತೆ, ಬಂಟ್ವಾಳ ಡಿವೈಎಸ್ ಪಿ ವೆಲೈಂಟಿನ್ ಡಿ ಸೋಜಾ ಸೂಚನೆಯಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪಿ.ಎಸ್. ಐ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಗದಗ ಜಿಲ್ಲೆ ಅಸುಂಡಿ ಗ್ರಾಮದ ನಿವಾಸಿಗಳಾದ ಸಿದ್ಧಾರ್ಥ, ಹಾಗೂ ದಾಕ್ಷಾಯಿಣಿ ಎಂದು ತಿಳಿದು ಬಂದಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರು ಸಹಿತ 85 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.