ದಲಿತ ಸಮುದಾಯಕ್ಕೆ ಮೀಸಲಿಟ್ಟ ಡಿಸಿ ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಮನವಿ

ಬೆಳ್ತಂಗಡಿ: ಬ್ರಿಟಿಷ್ ಸರ್ಕಾರ 1932 ರಿಂದ 1939 ರ ಅವಧಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಿಟ್ಟ ಡಿಸಿ ಮನ್ನಾ ಜಮೀನು ಇಂದಿಗೂ ಹಂಚಿಕೆಯಾಗದಿರುವುದು ದುರಂತ. ಜಾತಿ ತಾರತಮ್ಯಗೊಳಗಾಗಿರುವ ದಲಿತರು ತುಂಡು ಭೂಮಿಗಾಗಿ ಸ್ವಾತಂತ್ರ್ಯ ಭಾರತದಲ್ಲಿ ಹೋರಾಟದ ಹಾದಿ ಹಿಡಿದರೂ ಯಾವುದೇ ಸರ್ಕಾರಗಳು ಮೌನಕ್ಕೆ ಶರಣಾಗಿರುವುದು ಸರಿಯಲ್ಲ. ದಲಿತರಿಗೆ ಮೀಸಲಿಟ್ಟ ಜಮೀನುಗಳನ್ನು ಒತ್ತುವರಿ ಮಾಡಿದರೂ ಕಂದಾಯ ಇಲಾಖೆ ಇಂದಿಗೂ ತೆರವುಗೊಳಿಸಿರುವುದಿಲ್ಲ ಬೆಳ್ತಂಗಡಿ ತಾಲೂಕಿನಲ್ಲಿ ಸಾವಿರಾರು ಎಕರೆ ಡಿಸಿ ಮನ್ನಾ ಜಮೀನು ಇದ್ದರೂ ಇಂದಿಗೂ ತ ಜಮೀನಿಗಾಗಿ ದಲಿತರು ಕಂದಾಯ ಇಲಾಖೆ ಕಛೇರಿ ಅಲೆಯುವುದು ತಪ್ಪಿಲ್ಲ. ಆದುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ದ ತಾಲೂಕು ಸಂಚಾಲಕ ನೇಮಿರಾಜ್ ಕಿಲ್ಲೂರು ,ತಾಲೂಕು ಸಂಘಟನಾ ಸಂಚಾಲಕ ವೆಂಕಣ್ಣ ಕೊಯ್ಯುರು ತಾಲೂಕು ಖಜಾಂಚಿ ಬಿ.ಕೆ ಶೇಖರ್ ಕಣಿಯೂರು,ಹರೀಶ್ ಲಾಯಿಲ ಸೇರಿದಂತೆ ನಾಯಕರು ಉಪಸ್ಥಿತರಿದ್ದರು.

error: Content is protected !!