ಬೆಳ್ತಂಗಡಿ: ಬಿಸಿಲ ಬೇಗೆಯಿಂದ ಬಳಲಿದ್ದ ಬೆಳ್ತಂಗಡಿ ಜನತೆ ಕೊನೆಗೂ ಮಳೆಯಿಂದ ಸಮಾಧಾನ ಪಡುವಂತಾಗಿದೆ.
ತಾಲೂಕಿನ ಹಲವೆಡೆ ಮಳೆಯಾಗಿದ್ದು ಧರ್ಮಸ್ಥಳ, ಗೇರುಕಟ್ಟೆ, ಬೆಳ್ತಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಸಾಧಾರಣ ಒಳ್ಳೆಯ ಮಳೆ ಸುರಿದಿದೆ. ಅದಲ್ಲದೆ ಕೆಲವು ಕಡೆಗಳಲ್ಲಿ ಗಾಳಿ ಸಿಡಿಲಿನ ಅಬ್ಬರ ಹೆಚ್ಚಾಗಿದ್ದು ಲಾಯಿಲ ಗ್ರಾಮದಲ್ಲಿ ಸಿಡಿಲಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಸಿಡಿದ ಕಿಡಿಯಿಂದ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ನಡೆದಿದೆ.
ತಾಲೂಕಿನ ಲಾಯಿಲ ಗ್ರಾಮದ ರಾಗಿಬೆಟ್ಟು ಎಂಬಲ್ಲಿ ಭಾರೀ ಸಿಡಿಲಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿಯ ಕಿಡಿಗಳು ಬಿದ್ದು ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ. ಈ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿದ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿ ಹಾಗೂ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಸಂಭವಿಸಬಹುದಾದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ.