ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ ಇನ್ನಿಲ್ಲ

ಬೆಂಗಳೂರು: ತಮಿಳು ಚಿತ್ರರಂಗದ. ಪ್ರಸಿದ್ಧ ಹಾಸ್ಯ ನಟ ಇನ್ನಿಲ್ಲ ಹೃದಯಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಎ 15 ರಂದು ವಿವೇಕ್ ಅವರು ಕೋವಿಡ್ ಲಸಿಕೆ ಪಡೆದಿದ್ದರು. ಬಳಿಕ ಇತರರೂ ಲಸಿಕೆ ಪಡೆಯುವಂತೆ ಪ್ರೇರೇಪಿಸಿ ಮಾತನಾಡಿದ್ದರು.

ಅದರೆ ಕೋವಾಕ್ಸಿನ್ ಲಸಿಕೆ ಪಡೆದ ಮರು ದಿನವೇ ಅವರಿಗೆ ಹೃದಯಾಘಾತವಾಗಿದ್ದು ಈ ಬಗ್ಗೆ ಆಸ್ಪತ್ರೆಯ ತಜ್ಞ ಡಾ. ರಾಜು ಶಿವಸ್ವಾಮಿ, ವಿವೇಕ್ ಅವರು ಲಸಿಕೆ ಪಡೆದಿರುವುದಕ್ಕೂ, ಹೃದಯಾಘಾತಕ್ಕೂ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಎ 16ರಂದು ಹೃದಯಾಘಾತಕ್ಕೊಳಗಾದ ತಕ್ಷಣವೇ ವಿವೇಕರನ್ನು ವದಪಳನಿಯ ಎಸ್ ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

1989 ರಲ್ಲಿ ಸಿನಿಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದ ವಿವೇಕ್ ಪದ್ಮಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

error: Content is protected !!