ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗಳಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.
ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತೆ ಧೃಷ್ಟಿಯಿಂದ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ.
ಕೊರೊನಾ ಒಂದನೇ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಇದಕ್ಕಾಗಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ತಿಳಿಸಿದ್ದಾರೆ.