18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ, ಕೇಂದ್ರ ಸರ್ಕಾರದ ಮಹತ್ವದ ಆದೇಶ

ದೆಹಲಿ: ಕೊರೊನಾ ಹಾವಳಿ ದಿನದಿಂದ ದಿನ ಹೆಚ್ಚಾಗುತ್ತಿರುವುದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಈಗಾಗಲೇ ಕೊರೊನಾದಿಂದ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಎಲ್ಲರೂ ಅತಂಕಗೊಳಗಾಗುವಂತೆ ಮಾಡಿದೆ ಮಹಾಮಾರಿ ವೈರಸ್ ಇದಕ್ಕಾಗಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡು. ಕೊರೊನಾ ವ್ಯಾಕ್ಸಿನ್​ ಮೇಲಿನ ನಿರ್ಬಂಧ ಮತ್ತಷ್ಟು ಸಡಿಲಿಕೆ ಮಾಡಲಾಗಿದ್ದು. ಮೇ. 1ರಿಂದ ದೇಶಾದ್ಯಂತ ಮೂರನೇ ಹಂತದ ಕೋವಿಡ್​ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ, ಇದರಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್​ ಲಸಿಕೆ ಪಡೆದುಕೊಳ್ಳಲು ಅರ್ಹರು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಈದಿನ ವಿವಿಧ ಫಾರ್ಮಾ ಕಂಪನಿ ಮುಖ್ಯಸ್ಥರೊಂದಿಗೆ ವಿಡಿಯೋ ಕಾನ್ಪರೆನ್ಸ್​ ಮೂಲಕ ಮಹತ್ವದ ಚರ್ಚೆ ನಡೆಸಿದ್ದು, ಇದರ ಬೆನ್ನಲ್ಲೇ ಈ ಮಹತ್ವದ ಆದೇಶ ಹೊರಬಿದ್ದಿದೆ. ದೇಶದಲ್ಲಿ ಪ್ರತಿದಿನ ಎರಡು ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲಾಗುತ್ತಿರುವ ಕಾರಣ ಇದೀಗ ಲಸಿಕಾ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದ್ದು, ಇಲ್ಲಿಯವರೆಗೂ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್​ ನೀಡಲಾಗುತ್ತಿತ್ತು.

ಉಚಿತ ಅಥವಾ ಹಣ ನೀಡಬೇಕೆ 

18ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡುವ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಅದಕ್ಕಾಗಿ ಆದಷ್ಟು ಬೇಗ ಕಾರ್ಯಸೂಚಿಯನ್ನು ಹೊರ ತರುವ ಸಾಧ್ಯತೆ ಇದೆ. ವ್ಯಾಕ್ಸಿನ್​ ಪಡೆದುಕೊಳ್ಳುವವರು ಹಣ ಸಂದಾಯ ಮಾಡಬೇಕೆ? ಅಥವಾ ಉಚಿತವಾಗಿ ನೀಡಲಾಗುವುದೇ? ಎಂಬ ಪ್ರಶ್ನೆ ಇದೀಗ ಉದ್ಭವವಾಗಿದೆ.

ಸದ್ಯ ದೇಶದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್​ ವ್ಯಾಕ್ಸಿನ್ ಡೋಸ್ ಉಚಿತವಾಗಿ ನೀಡಲಾಗುತ್ತಿದ್ದು, ಇದೀಗ ಯಾವ ರೀತಿಯ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

error: Content is protected !!