ಬೆಂಗಳೂರು: ಕೊರೊನಾ ಹಾವಳಿ ದಿನದಿಂದ ದಿನ ರಾಜ್ಯದಲ್ಲಿ ಹೆಚ್ಚಾಗುತಿದ್ದು ಕಟ್ಟುನಿಟ್ಟಿನ ನಿಯಮಗಳು ಜಾರಿಯಾದ ಬಳಿಕ ಶವಸಂಸ್ಕಾರದಲ್ಲಿ 20 ಜನರಿಗೆ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಅದರೆ ಇದೀಗ ಇದನ್ನು ತಿದ್ದುಪಡಿ ಮಾಡಿ, ಇಂದಿನಿಂದ ಶವಸಂಸ್ಕಾರದಲ್ಲಿ ಐದು ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಿ ಸರ್ಕಾರ ಹೊಸ ಆದೇಶ ಹೊರಡಿಸಿದೆ.
ಕೋವಿಡ್ ನಿಯಮ ಪಾಲಿಸಿಕೊಂಡು ಐದು ಜನ ಮಾತ್ರ ಶವಸಂಸ್ಕಾರದಲ್ಲಿ ಭಾಗಿಯಾಗಬೇಕು ಎಂದು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸರ್ಕಾರ ದಿನದಿಂದ ದಿನಕ್ಕೆ ಕಟ್ಟುನಿಟ್ಟಿನ ಕ್ರಮಗಳು ಜಾರಿ ಮಾಡುತ್ತಾ ಬರುತ್ತಿದ್ದು, ಈಗಾಗಲೇ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಜಾರಿಯಲ್ಲಿದೆ.