ಬೆಳ್ತಂಗಡಿಗೆ ವಕ್ಕರಿಸಿದ ಕೊರೋನಾ ಗುಮ್ಮ!: ಬುಧವಾರ 93, ಗುರುವಾರ 43 ಮಂದಿಗೆ ಪಾಸಿಟಿವ್!: ಲಾಕ್ ಡೌನ್ ನಡುವೆಯೂ ಕೋವಿಡ್ ಅಟ್ಟಹಾಸ: ನಿಯಮ ಪಾಲಿಸದಿದ್ದರೆ ಪರಿಸ್ಥಿತಿ ಗಂಭೀರ!: ರಾಜ್ಯಲ್ಲಿಂದು 35,024, ದ.ಕ.ದಲ್ಲಿ 1,175 ಮಂದಿಗೆ ಪಾಸಿಟಿವ್, 270 ಮಂದಿ ಸಾವು

 

 

 

 

 

ಬೆಳ್ತಂಗಡಿ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನ ಏರಿಕೆಯಾಗುತ್ತಲೇ ಇದೆ ಅದಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಬ್ಬರ ಹೆಚ್ಚಾಗುತ್ತಿದೆ. ಕೊರೊನಾ ಕರ್ಫ್ಯೂ ವಿಧಿಸಿದರೂ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವುದು ಆತಂಕಕ್ಕೀಡು ಮಾಡಿದೆ. ಇವತ್ತು ರಾಜ್ಯದಲ್ಲಿ ಸೋಂಕಿನ ಸಂಖ್ಯೆ 35,024 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ‌.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರಿಕೆ ಕಂಡ ಪಾಸಿಟಿವ್: 

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ‌ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇವತ್ತು 1175 ಮಂದಿಗೆ ಕೊರೊನಾ ಪಾಸಿಟಿವ್ ಧೃಢ ಪಟ್ಟಿದ್ದು ಬೆಳ್ತಂಗಡಿಯಲ್ಲಿ 43 ಮಂದಿಗೆ ಕೊರೊನಾ ಪಾಸಿಟಿವ್ ಕೇಸ್ ಇದೆ. ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 5662 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. 206 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಈವರೆಗೆ 756 ಮಂದಿ ಸಾವನ್ನಪ್ಪಿದ್ದಾರೆ. ದ.ಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು 43,904 ಪಾಸಿಟಿವ್ ಕೇಸ್ ದಾಖಲಾಗಿದೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ ಏರಿದೆ.

ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 14,74,846ಕ್ಕೆ ಏರಿದೆ. ಇಂದು 270 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 15,306ಕ್ಕೆ ಏರಿದೆ. 14,142 ಮಂದಿ ಗುಣಮುಖರಾಗಿದ್ದು, ಈವರೆಗೆ 11,10,025 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬರೋಬ್ಬರಿ 2,431 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.‌ ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 19.92 ರಷ್ಟಿದ್ದು, ಸಾವಿನ‌ ಶೇಕಡವಾರು ಪ್ರಮಾಣ 0.77 ರಷ್ಟಿದೆ ಎಂದು ತಿಳಿದು ಬಂದಿದೆ.

error: Content is protected !!