ಧರ್ಮಸ್ಥಳ ಸಮೀಪದ ಬೊಳಿಯಾರ್ ಕಂಟೈನ್ಮೇಂಟ್ ಝೋನ್

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶದಲ್ಲಿ ಕೊರೋನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಾಲೂಕು ಆಡಳಿತದ ಸೂಚನೆಯಂತೆ ಬೊಳಿಯಾರು ಪ್ರದೇಶವನ್ನು ಕಂಟೈ ನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.

ಬೊಳಿಯಾರು ಪ್ರದೇಶದಲ್ಲಿ 16 ಮನೆಗಳಿದ್ದು, ಅದರಲ್ಲಿ 14 ಮನೆಗಳ ಸುಮಾರು 34 ಕೊರೋನಾ ಪ್ರಕರಣಗಳು ದಾಖಲಾಗಿದೆ. ಇದೀಗ ಇಲ್ಲಿನ ಮುಖ್ಯ ರಸ್ತೆಯನ್ನು ಮುಚ್ಚಲಾಗಿದ್ದು ಬೊಳಿಯಾರು ಪ್ರದೇಶದವರು ಯಾರು ಕೂಡ ಹತ್ತು ದಿನಗಳ ವರೆಗೆ ಹೊರಗೆ ಹೋಗುವಂತಿಲ್ಲ. ಸದ್ರಿ ಪ್ರದೇಶಕ್ಕೆ ಇತರರಿಗೆ ಪ್ರವೇಶ ನಿಷೇಧಿಸಲಾಗಿದೆ. ಸದ್ರಿ ಪ್ರದೇಶಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದೆ. ಇಲ್ಲಿನ ನಿವಾಸಿಗಳಿಗೆ ಅಗತ್ಯವಾದ ದಿನ ನಿತ್ಯದ ವಸ್ತುಗಳಿಗೆ ಗ್ರಾಮಪಂಚಾಯತಿನಿಂದ ಕ್ರಮ ವಹಿಸಲಾಗುವುದು ಎಂದು ಪಂಚಾಯಿತಿನ ಅಧಿಕಾರಿಗಳು ತಿಳಿಸಿದ್ದಾರೆ.

ಬೊಳಿಯಾರು ಪ್ರದೇಶಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂಸದಸ್ಯರುಗಳು , ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು ,ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದಾರೆ.

ಈ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿನಿಂದ ಹಾಗೂ ಪೊಲೀಸ್ ಇಲಾಖೆಯಿಂದ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಭಾನುವಾರ ತುರ್ತು ಜಾಗೃತಿ ಸಭೆ ಪಂಚಾಯಿತಿ ಅಧ್ಯಕ್ಷೆ ಜಯ ಮೋನಪ್ಪ ಗೌಡ ನೇತೃತ್ವದಲ್ಲಿ ಪಂಚಾಯಿತಿ ಸಬಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕೊರೋನಾ ಸೊಂಕು ತಡೆಗಟ್ಟುವಿಕೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

ತುರ್ತು ಸಭೆಯಲ್ಲಿ ಅಂಗಡಿಗಳು ಮುಂಗಟ್ಟುಗಳು ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲಾಯಿತು. ಹೊರ ಜಿಲ್ಲೆಯವರ ಮದುವೆ ಸಮಾರಂಭಗಳಿಗೆ ಅವಕಾಶವಿಲ್ಲ, ಸಂಘಸಂಸ್ಥೆಗಳ ಸಭೆಗೆ ಅವಕಾಶವಿಲ್ಲ ಎಂದು ತೀರ್ಮಾನಿಸಲಾಯಿತು. ವಾಹನಗಳಲ್ಲಿ ಸಾರಿಗೆ ನಿಯಮ ಪಾಲಿಸುವಂತೆ ಹಾಗೂ ಕೋವಿಡ್ ನಿಯಮ ಪ್ರಕಾರ ಮಿತಿ ಮೀರಿ ಜನ ಸಾಗಿಸದಂತೆ ಸೂಚನೆ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಇದೀಗ ಕೊರೋನಾ ಸೋಂಕು ವ್ಯಾಪಾಕವಾಗಿ ಹರಡುತ್ತಿದ್ದು ಜನರು ಎಚ್ಚರಿಕೆ ವಹಿಸುವಂತೆ ಹಾಗೂ ಸಾಧ್ಯವಾದಷ್ಟು ಮನೆಗಳಲ್ಲಿಯೇ ಇದ್ದು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಗ್ರಾಮ ಪಂಚಾಯಿತಿ ಆಡಳಿತ ಸೂಚಿಸಿದೆ.

ಕೊರೋನಾ ಸೋಂಕಿನ ಕುರಿತು ಜನರು ಎಚ್ಚರಿಕೆ ವಹಿಸುವಂತೆ ಹಾಗೂ ಸಾಧ್ಯವಾದಷ್ಟು ಮನೆಗಳಲ್ಲಿಯೇ ಇದ್ದು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಗ್ರಾಮಪಂಚಾಯಿತಿ ಆಡಳಿತ ಸೂಚಿಸಿದೆ.

ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಪಿಡಿಒ ಉಮೇಶ್, ಕೋವಿಡ್ ಪ್ರಕರಣ ಇರುವ ಪ್ರದೇಶಗಳ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು.

error: Content is protected !!