ಬೆಂಗಳೂರು: ಐಪಿಎಲ್ ಕೂಟದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊರೋನಾಘಾತಕ್ಕೆ ಒಳಗಾಗಿದೆ. ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಹಾಗೂ ಸಿಇಓ ಕಾಶೀ ವಿಶ್ವನಾಥನ್ ಅವರ ಕೊರೋನಾ ವರದಿ ಪಾಸಿಟಿವ್ ಎಂದು ಬಂದಿರುವುದಾಗಿ ತಿಳಿದಿದೆ.
ವರದಿಯಲ್ಲಿ ಸಮಾಧಾನಕರ ಅಂಶ ಎಂದರೆ ಸಿ.ಎಸ್.ಕೆ. ತಂಡದ ಆಟಗಾರರ ವರದಿ ನೆಗೆಟಿವ್ ಬಂದಿದೆ ಎನ್ನಲಾಗುತ್ತಿದೆ. ಸಿ.ಎಸ್.ಕೆ. ಬುಧವಾರ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದ್ದು, ಪಂದ್ಯ ನಡೆಯಲಿದೆಯೇ ಅಥವಾ ಮುನ್ನೆಚ್ಚರಿಕಾ ಕ್ರಮವಾಗಿ ಪಂದ್ಯಟ ಮುಂದೂಡಲಾಗುವುದೇ ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿಲ್ಲ. ಒಟ್ಟಿನಲ್ಲಿ ಐಪಿಎಲ್ ಪಂದ್ಯಾವಳಿಗೂ ಕೊರೋನಾ ಭೀತಿ ಎದುರಾಗಿದ್ದು, ಕಟ್ಟುನಿಟ್ಟಿನ ಸುರಕ್ಷಿತ ಕ್ರಮ ಕೈಗೊಳ್ಳದಿದ್ದಲ್ಲಿ ಹೆಚ್ಚಿನ ಸಮಸ್ಯೆ ಎದುರಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.