ಮಂಗಳೂರು: ಜಿಲ್ಲೆಯಲ್ಲಿ 3 ವೈದ್ಯಕೀಯ ಆಮ್ಲಜನಕ ತುಂಬುವ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ಸ್ಪಷ್ಟ ಪಡಿಸಿದೆ.
ಆಮ್ಲಜನಕ ಪೂರೈಕೆ ಘಟಕ ಐನಾಕ್ಸ್ ಪಾಲ್ಘಾಟ್ ಇವರಿಂದ ಜಿಲ್ಲೆಗೆ ಲಿಕ್ವಿಡ್ ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿರುವುದರಿಂದ, ಆಸ್ಪತ್ರೆಗಳಿಗೆ ಬೇಕಾದಷ್ಟು ಆಮ್ಲಜನಕ ಸಿಲಿಂಡರ್‍ಗಳ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿರುತ್ತದೆ.
ಪ್ರಸ್ತುತ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲಕ್ಕೀಡಾಗಿ ಗಾಬರಿಗೊಳ್ಳುವ ಅಗತ್ಯವಿಲ್ಲ. ಈ ಮೂಲಕ ದ.ಕ. ಜಿಲ್ಲೆಯಲ್ಲಿ ಆಮ್ಲಜನಕ ಕೊರತೆ ಎದುರಾಗಲಿದೆ ಎಂಬ ಗೊಂದಲಕ್ಕೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟ ಪಡಿಸಿದೆ.