ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್-19 ಕೊರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಧರ್ಮಸ್ಥಳ ಗ್ರಾಮ ಪಂಚಾಯಿತಿ ಹಾಗೂ ಸಂಘಸಂಸ್ಥೆಗಳ ಸಹಕಾರದಿಂದ ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಪಯುಕ್ತ ಔಷದಿ, ಮಾತ್ರೆಗಳನ್ನು ನೀಡಲಾಯಿತು.
ಗ್ರಾ.ಪಂ. ಉಪಾಧ್ಯಕ್ಷ ಶ್ರೀನಿವಾಸ ರಾವ್, ಸದಸ್ಯರಾದ ಸುಧಾಕರ ಗೌಡ, ಹರ್ಷಿತ್ ಜೈನ್ ಅವರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಆಕಾಶ್ ಅವರಿಗೆ ಹಸ್ತಾಂತರಿಸಿದರು.
ಗ್ರಾ.ಪಂ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.