ಧರ್ಮಸ್ಥಳ ಕೋವಿಡ್ ಕಾರ್ಯಪಡೆ ಪ್ರಗತಿ ಪರಿಶೀಲನಾ ಸಮಾಲೋಚನಾ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಕೋವಿಡ್ ಕಾರ್ಯಪಡೆಯ ಪ್ರಗತಿ ಪರಿಶೀಲನೆ ಕುರಿತು ಸಮಾಲೋಚನಾ ಸಭೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರ ಅಧ್ಯಕ್ಷತೆ ಇಲ್ಲಿನ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಬೆಡ್‌ಗಳ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಧರ್ಮಸ್ಥಳದ ರಜತಾದ್ರಿ ಸಭಾಭವನವನ್ನು ಉಪಯೋಗಿಸುವಂತೆ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಲಹೆ ನೀಡಿದ್ದು, ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತದಿಂದ ಅಲ್ಲಿ ಚಿಕಿತ್ಸೆಗಾಗಿ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಕೊರೋನಾ ಕೇರ್ ಸೆಂಟರ್ ಆರಂಭಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು, ನೋಡೆಲ್ ಅಧಿಕಾರಿ ಜಯಕೀರ್ತಿ, ಉಪನೋಡೆಲ್ ಅಧಿಕಾರಿ ಹಾಗೂ ಕಂದಾಯ ನಿರೀಕ್ಷಕ ಪಾವಡಪ್ಪ ದೊಡಮನಿ, ಶ್ರೀ ಧರ್ಮಸ್ಥಳ ಕ್ಷೇತ್ರದ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್, ಗ್ರಾ.ಪಂ ಸದಸ್ಯರುಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು ಸುಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಗ್ರಾ.ಪಂ. ಸಿಬ್ಬಂದಿ ದೇವಿಪ್ರಸಾದ್ ಬೊಳ್ಮ ಸ್ವಾಗತಿಸಿ ವಂದಿಸಿದರು.

error: Content is protected !!