ಕುವೆಟ್ಟು: ಉಜಿರೆ ‘ಬದುಕು ಕಟ್ಟೋಣ ಬನ್ನಿ ತಂಡ ‘ ಮತ್ತು ‘ಬೆಳ್ತಂಗಡಿ ರೋಟರಿ ಕ್ಲಬ್ ‘ಸಹಯೋಗದಲ್ಲಿ ಇಂದು ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಂದು “ಆಪ್ತರಕ್ಷಕ” ವಾಹನ ಗ್ರಾ.ಪಂ ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಮತ್ತು ಪಿಡಿಓ ಶ್ರೀನಿವಾಸ್ ಡಿ.ಪಿ ಯವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಲಾಯಿತು.
ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ 9 ಮಂದಿ ಆಶಾ ಕಾರ್ಯಕರ್ತೆಯರು ಮತ್ತು ಇಬ್ಬರು ನರ್ಸ್ ಗಳಿಗೆ ಗೌರವಿಸಿ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಪ್ರದೀಶ್ ಶೆಟ್ಟಿ , ಪಿಡಿಓ ಶ್ರೀನಿವಾಸ್ ಡಿ.ಪಿ , ಕಾರ್ಯದರ್ಶಿ ಸೇವಂತಿ , ನಿಯೋಜಿತ ರೋಟರಿ ಕ್ಲಬ್ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಶಶಿಧರ್ ಕಲ್ಮಂಜ, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ್.ಕೆ.ವಿ., ಅಬೂಬಕ್ಕರ್ ರೋಟರಿ ಕ್ಲಬ್ ಮತ್ತಿತರರು ಭಾಗವಹಿಸಿದ್ದರು.
ಚಾರ್ಮಾಡಿ: ಉಜಿರೆ ‘ಬದುಕು ಕಟ್ಟೋಣ ಬನ್ನಿ ತಂಡ ‘ ಮತ್ತು ‘ಬೆಳ್ತಂಗಡಿ ರೋಟರಿ ಕ್ಲಬ್ ‘ಸಹಯೋಗದಲ್ಲಿ ಇಂದು ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಂದು “ಆಪ್ತರಕ್ಷಕ” ವಾಹನ ಗ್ರಾ.ಪಂ ಅಧ್ಯಕ್ಷ ಕೆ.ವಿ.ಪ್ರಸಾದ್ ಮತ್ತು ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ ಇವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಲಾಯಿತು.
ಚಾರ್ಮಾಡಿ ಗ್ರಾ.ಪಂ ವ್ಯಾಪ್ತಿಯ 9 ಮಂದಿ ಆಶಾ ಕಾರ್ಯಕರ್ತೆಯರಿಗೆ ಗೌರವಿಸಿ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಕೆ.ವಿ.ಪ್ರಸಾದ್, ಚಾರ್ಮಾಡಿ ಪಿಡಿಓ ಪ್ರಕಾಶ್ ಶೆಟ್ಟಿ ನೊಚ್ಚ , ಬೆಳ್ತಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಶಶಿಧರ್ ಕಲ್ಮಂಜ, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ್.ಕೆ.ವಿ, ಅಬೂಬಕ್ಕರ್ ರೋಟರಿ ಕ್ಲಬ್ , ಚಾರ್ಮಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀ ಬಾಯ್, ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಮತ್ತಿತರರು ಭಾಗವಹಿಸಿದ್ದರು.
ಮುಂಡಾಜೆ: ಉಜಿರೆ ‘ಬದುಕು ಕಟ್ಟೋಣ ಬನ್ನಿ ತಂಡ ‘ ಮತ್ತು ‘ಬೆಳ್ತಂಗಡಿ ರೋಟರಿ ಕ್ಲಬ್ ‘ಸಹಯೋಗದಲ್ಲಿ ಇಂದು ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಂದು “ಆಪ್ತರಕ್ಷಕ” ವಾಹನ ಗ್ರಾ.ಪಂ. ಅಧ್ಯಕ್ಷೆ ರಂಜಿನಿ ರವಿ ಕುಮಾರ್ ಅವರಿಗೆ ಕೀ ನೀಡುವ ಮೂಲಕ ಹಸ್ತಾಂತರಿಸಲಾಯಿತು.
ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ 4 ಮಂದಿ ಆಶಾ ಕಾರ್ಯಕರ್ತೆಯರಿಗೆ ಗೌರವಿಸಿ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಸುಮಾ.ಎ.ಎಸ್, ವಿ.ಎ. ರಾಘವೇಂದ್ರ, ಬೆಳ್ತಂಗಡಿ ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೇಟ್ನಾಯ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರು ಶಶಿಧರ್ ಕಲ್ಮಂಜ ,ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಶ್ರೀಧರ್.ಕೆ.ವಿ., ಅಬೂಬಕ್ಕರ್ ರೋಟರಿ ಕ್ಲಬ್ , ಮುಂಡಾಜೆ ಆರೋಗ್ಯಾಧಿಕಾರಿ ಡಾ.ಕಾವ್ಯ, ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಮತ್ತಿತರರು ಭಾಗವಹಿಸಿದ್ದರು.