ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿದ್ದ ಕೋವಿಡ್-19 ಲಸಿಕಾ ಕೇಂದ್ರವನ್ನು ಸಂತೆಕಟ್ಟೆ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಮೇ.18 ರಿಂದ ಆರಂಭಿಸಲಾಗಿರುವ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು.
ಬೆಳ್ತಂಗಡಿ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್-18 ಲಸಿಕೆಯನ್ನು ನೀಡಲಾಗುತ್ತಿತ್ತು. ಇಲ್ಲಿ ರೋಗಿಗಳು, ಕೊರೊನಾ ಸೋಂಕಿತರು ಹಾಗೂ ಲಸಿಕೆ ಪಡೆಯುವವರು ಬರುತ್ತಿದ್ದರಿಂದ ಸುವ್ಯವಸ್ಥೆಯ ದೃಷ್ಟಿಯಿಂದ ಲಸಿಕೆ ಪಡೆಯುವವರಿಗೆ ವಿಶಾಲವಾದ ಶ್ರೀಮಂಜುನಾಥ ಸ್ವಾಮಿ ಸಭಾಭವನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಲಸಿಕಾ ಕೇಂದ್ರಕ್ಕೆ ಬರುವ ಮುಂಚಿತವಾಗಿ ಸಾರ್ವಜನಿಕರು ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯತೆಯ ಕುರಿತು ಮಾಹಿತಿ ಪಡೆದು ಯಾವುದೇ ಆತಂಕ, ಭೀತಿ ಇಲ್ಲದೆ ಲಸಿಕೆ ಪಡೆಯಬಹುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.
ಈ ಸಂದರ್ಭ ಪ.ಪಂ. ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯ ಶರತ್ ಕುಮಾರ್ ಶೆಟ್ಟಿ, ಮೇಲಂತಬೆಟ್ಟು ಗ್ರಾ.ಪಂ. ಸದಸ್ಯ ಚಂದ್ರರಾಜ್, ತಹಸೀಲ್ದಾರ್ ಮಹೇಶ್ ಜೆ., ತಾ.ಪಂ. ಇಒ ಕುಸುಮಾಧರ್, ತಾಲೂಕು ವೈದಾಧಿಕಾರಿ ಡಾ. ಕಲಾಮಧು, ತಾ.ಆಸ್ಪತ್ರೆ ಆಡಳಿತ ವೈದಾಧಿಕಾರಿ ಡಾ. ವಿದ್ಯಾವತಿ, ಪ.ಪಂ. ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಬಿಜೆಪಿ ಪ್ರಮುಖ್ ಬಾಲಕೃಷ್ಣ ಶೆಟ್ಟಿ ಸವಣಾಲು, ಆರೋಗ್ಯ ಇಲಾಖೆ ಸಂಯೋಜಕ ಅಜಯ್, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಸುಶ್ರುತ ಅಧಿಕಾರಿ, ಆಶಾ, ಕುಮುದಾಕ್ಷಿ ಇದ್ದರು.
ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಕೋವಿಡ್ ಲಸಿಕಾ ಕೇಂದ್ರದಲ್ಲಿ ಮೊದಲ ದಿನ 45 ವರ್ಷ ಮೇಲ್ಪಟ್ಟು 25 ಮಂದಿ ಲಸಿಕೆ ಪಡೆದರು.