ನಿಸ್ವಾರ್ಥ ಸೇವೆ ನೀಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ಎಲ್ಲರೂ ಗೌರವಿಸೋಣ:  ಆಶಾ ಕಾರ್ಯಕರ್ತೆಯರಿಗೆ ಆಕ್ಸೀಮೀಟರ್ ಕೊಡುಗೆ

 

ಬೆಳ್ತಂಗಡಿ: ಆಶಾ ಕಾರ್ಯಕರ್ತೆಯರು ಮನೆಮನೆಗೆ ಭೇಟಿ ನೀಡಿ ನಮ್ಮ ಆರೋಗ್ಯ ವಿಚಾರಿಸುವಂತಹ ಕೆಲಸ ಮಾಡುತ್ತಿರುವುದು ಅದರಲ್ಲೂ ಕೊರೊನಾದ ಈ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ನಿಸ್ವಾರ್ಥ ಸೇವೆ ನೀಡುತ್ತಿರುವುದು ಶ್ಲಾಘನೀಯ ಅವರ ಈ ಕಾರ್ಯಕ್ಕೆ ಬೆಂಬಲವಾಗಿ ನಾವೆಲ್ಲರೂ ನಿಂತು ಪ್ರೋತ್ಸಾಹಿಸುವಂತಹ ಕೆಲಸವನ್ನು ಮಾಡಬೇಕು ನಮ್ಮ ಆರೋಗ್ಯದ ಬಗ್ಗೆ ವಿಚಾರಿಸಲು ನಮ್ಮ ಮನೆಗೆ ಭೇಟಿ ನೀಡಿದಾಗ ಗೌರವಯುತವಾಗಿ ಅವರಲ್ಲಿ ವರ್ತಿಸಬೇಕು ಎಂದು ಲಾಯಿಲದ ಗುತ್ತಿಗೆದಾರರಾದ ರಮೇಶ್ ಆರ್. ತಿಳಿಸಿದರು ಅವರು ಆಶಾ ಕಾರ್ಯಕರ್ತೆಯರಿಗೆ ಆಕ್ಸೀಮೀಟರ್ ನ್ನು ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಹಸ್ತಾಂತರಿಸಿ ಮಾತನಾಡಿದರು.

ಮನೆ ಮನೆಗಳಿಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೊರೊನಾದ ಈ ಸಮಯದಲ್ಲಿ ಜನರ ಅಕ್ಸೀಜನ್ ಪರೀಕ್ಷಿಸಲು ತುರ್ತಾಗಿ ಆಕ್ಸೀಮೀಟರ್ ನ ಅವಶ್ಯಕತೆಯನ್ನು ಅರಿತು ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಶೆಟ್ಟಿಯವರ ಕೋರಿಗೆಯ ಮೇರೆಗೆ 6 ಆಕ್ಸೀಮೀಟರನ್ನು ಅವರು ಉಚಿತವಾಗಿ ನೀಡಿದರು. ಆಕ್ಸೀಮೀಟರ್ ಕೊಡುಗೆಯಾಗಿ ನೀಡಿದ ರಮೇಶ್ ಅವರಿಗೆ ಆಶಾ ಕಾರ್ಯಕರ್ತೆಯರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಪಂಚಾಯತ್ ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ಡಾನ, ಸದಸ್ಯರುಗಳಾದ ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ ಎಣಿಂಜೆ, ಅಭಿವೃದ್ಧಿ ಅಧಿಕಾರಿ ವೆಂಕಟಕೃಷ್ಣ ರಾಜ , ಕಾರ್ಯದರ್ಶಿ ಪುಟ್ಟ ಸ್ವಾಮಿ, ಲೆಕ್ಕ ಸಹಾಯಕಿ ರೇಶ್ಮಾ ಮ ಗಂಜಿಗಟ್ಟಿ ಉಪಸ್ಥಿತರಿದ್ದರು.

error: Content is protected !!