ಭತ್ತ ಬಿತ್ತನೆ‌ ಬೀಜ‌ ಲಭ್ಯ: ಆಸಕ್ತರು‌ ಸಂಪರ್ಕರಿಸುವಂತೆ‌ ಬೆಳ್ತಂಗಡಿ ಕೃಷಿ ಇಲಾಖೆ ಪ್ರಕಟಣೆ: ಸೂಕ್ತ ದಾಖಲಾತಿ‌ ಸಲ್ಲಿಸಲು ಕೋರಿಕೆ

ಬೆಳ್ತಂಗಡಿ: ಪ್ರಸಕ್ತ 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ಸಾಮಾನ್ಯ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ, ವಹಣಿ, ಅಧಾರ್‌ ಜೆರಾಕ್ಸ್ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಪ್ರತಿಯನ್ನು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ರೈತರು ತಮ್ಮ ಭತ್ತದ ಕೃಷಿ ಜಮೀನಿನ ಆರ್.ಟಿ.ಸಿ. ಪಹಣಿ, ಆಧಾರ್ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯನ್ನು ಸಲ್ಲಿಸಿ, ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಾಲೂಕಿನ ಭತ್ತ ಬೆಳೆಯುವ ಎಲ್ಲಾ ವರ್ಗದ ರೈತರಿಗೆ ಮಾಹಿತಿ ನೀಡಿದ್ದಾರೆ.

 

error: Content is protected !!