ಬೆಳ್ತಂಗಡಿ: ಜಲಜೀವನ್ ಮಿಷನ್ ಅಡಿಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸುಮಾರು 12 ಕೋಟಿ ರೂ ವೆಚ್ಚದಲ್ಲಿ ಅನೇಕ ಟ್ಯಾಂಕ್ ಗಳು ನೀರಾವರಿಗೆ ಸಂಬಂಧ ಪಟ್ಟ ಪೈಪ್ ಲೈನ್ ಗಳನ್ನು ಅನುಷ್ಠಾನಗೊಳಿಸಲಾಗುತಿದೆ.
ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಲಾಯಿಲ ಗ್ರಾಮ ಪಂಚಾಯತ್ ನ ಕುಂಟಿನಿ ಎಂಬಲ್ಲಿ ಜಲಜೀವನ ಮಿಷನ್ ಅಡಿಯಲ್ಲಿ ರೂ 30 ಲಕ್ಷ ರೂಪಾಯಿಯ ನೂತನ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ನರೇಂದ್ರ ಮೋದಿ ಸರ್ಕಾರ ಕೊಟ್ಟಿರತಕ್ಕಂತಹ ಕೇಂದ್ರ ಸರ್ಕಾರದ ಜಲ ಜೀವನ ಮಿಷನ್ ಅಡಿಯಲ್ಲಿ ಈ ಯೋಜನೆ ಅನುಷ್ಠಾನ ಆಗುತಿದೆ. ನಾಗರಿಕರ ಬಹುದಿನಗಳ ಬೇಡಿಕೆಯಾದ ನಳ್ಳಿ ನೀರಿನ ಸರಬರಾಜು ಮಾಡಲು ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಲಾಯಿಲ ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯೆ ಸೌಮ್ಯಲತಾ ಜಯಂತ ಗೌಡ ಅವರ ಮನವಿ ಮೇರೆಗೆ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಈ ಭಾಗದ ಜನರ ನೀರಿನ ಅವಶ್ಯಕತೆಗೆ ತುರ್ತು ಸಂದರ್ಭದಲ್ಲಿ ಟ್ಯಾಂಕ್ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿ ಕೊರೊನಾ ಮಹಾಮಾರಿಯ ಸಂಕಷ್ಟದ ಸಮಯದಲ್ಲೂ ಕಾಮಗಾರಿಯನ್ನು ಅತ್ಯಂತ ಶೀಘ್ರವಾಗಿ ಪೂರ್ಣಗೊಳಿಸಿ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ನೀಗಿಸಲಾಗುವುದು ಎಂದರು. ಅದಲ್ಲದೆ ಕಾಮಗಾರಿ ಸಂದರ್ಭದಲ್ಲಿ ಕಾಮಗಾರಿಯಲ್ಲಿ ಲೋಪವಾಗದಂತೆ ಈ ಭಾಗದ ಗ್ರಾಮ ಪಂಚಾಯತ್ ಸದಸ್ಯರು ಗಮನ ಹರಿಸಿ ಉತ್ತಮ ಗುಣಮಟ್ಟದ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಲಾಯಿಲ ಗ್ರಾ. ಪಂ ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ದಾನ, ಉಪಾಧ್ಯಕ್ಷ ಗಣೇಶ್, ಪಂಚಾಯತ್ ಸದಸ್ಯರುಗಳು, ತಾ.ಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಶಿಧರ್ ಕಲ್ಮಂಜ, , ಗಿರೀಶ್ ಡೋಂಗ್ರೆ,ಸುಧಾಕರ, ಲಾಯಿಲ ಪಂಚಾಯತ್ ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕಿ ರೇಶ್ಮಾ ಮ ಗಂಜಿಗಟ್ಟಿ,ಉಪಸ್ಥಿತರಿದ್ದರು.ಲಾಯಿಲ ಪಂಚಾಯತ್ ಪಿಡಿಓ ವೆಂಕಟಕೃಷ್ಣರಾಜ ಕಾರ್ಯಕ್ರಮ ನಿರ್ವಹಿಸಿದರು.