ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಿಂಜೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದೆ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ(22) ಎಂಬಾತ,ತನ್ನ ಮನೆ ಸಮೀಪದ ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದು ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ಹೆತ್ತವರು ಧರ್ಮಸ್ಥಳ ಪೋಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೋಲೀಸರು ಕೂಡಲೇ ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಯಾವುದೇ ಸರಿಯಾದ ಉದ್ಯೋಗವಿಲ್ಲದೆ ತಿರುಗಾಡುತ್ತಿರುವ ಈತ ಈ ಹಿಂದೆಯೂ ಇಂತಹ ಕೃತ್ಯವೆಸಗಿದ್ದ ಎಂಬ ಆರೋಪವೂ ಸ್ಥಳೀಯ ರಿಂದ ಕೇಳಿ ಬರುತ್ತಿದೆ.

ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಠಾಣಾಧಿಕಾರಿ ಪವನ್ ನಾಯಕ್ ಮತ್ತು ತಂಡದವರು ತನಿಖೆ ನಡೆಸುತ್ತಿದ್ದಾರೆ.

error: Content is protected !!