ಬೆಳ್ತಂಗಡಿ: ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುವ ಅರ್ಚಕರು ಹಾಗೂ ಸಿಬ್ಬಂದಿಗೆ ರಾಜ್ಯ ಸರಕಾರ ಪರಿಹಾರ ಪ್ಯಾಕೇಜ್ ಘೋಷಿಸಿದ್ದು, ಬೆಳ್ತಂಗಡಿ ಶ್ರಮಿಕ ಕೇಂದ್ರದಲ್ಲಿ ಜೂ.11ರ ಬೆಳಿಗ್ಗೆ ಅರ್ಜಿ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಘೋಷಣೆಯಂತೆ ಮುಜರಾಯಿ ಇಲಾಖೆಯ “ಸಿ” ವರ್ಗದ ದೇವಸ್ಥಾನಗಳಲ ಅರ್ಚಕರು, ಅಡಿಗೆ ಕೆಲಸಗಾರರು ಮತ್ತು ಸಿಬ್ಬಂದಿಗಳಿಗೆ ತಲಾ 3 ಸಾವಿರ ರೂ. ಗಳನ್ನು ನೀಡಲು ನಿರ್ಧರಿಸಲಾಗಿತ್ತು. ಅರ್ಜಿ ಸಲ್ಲಿಕೆ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಲಿದ್ದು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವೆಂದ್ರ ಹೆಗ್ಡೆ ಕೊಕ್ರಾಡಿ ಅವರು ನೇತೃತ್ವ ವಹಿಸಲಿದ್ದಾರೆ. ಈ ಮೂಲಕ ಪರಿಹಾರ ನಿಧಿ ಅರ್ಜಿದಾರರ ಖಾತೆಗೆ ನೇರ ಜಮಾವಣೆಯಾಗಲಿದೆ. ಅರ್ಹರು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ವಿವರೊಂದಿಗೆ ಜೂ.11ರಂದು ಶ್ರಮಿಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ. ಸಂ. 9900569039 ಸಂಪರ್ಕಿಸಬಹುದು.