ರಸ್ತೆ ಕಾಮಗಾರಿ ಗುತ್ತಿಗೆದಾರರ ಬೇಜವಾಬ್ದಾರಿ!: ಮಳೆ ಸುರಿದು ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು, ರಸ್ತೆ ಸಂಪರ್ಕ ಸಂಪೂರ್ಣ ಬಂದ್!: ಕಾಟಚಾರದ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ: ನೆರಿಯ ಗ್ರಾಮದ ಕಾಟಾಜೆಯಲ್ಲಿ ಘಟನೆ: ಕಳೆಂಜ ಗ್ರಾಮ, ಕಾಯರ್ತಡ್ಕದಲ್ಲಿ ಮಳೆಯಿಂದ ಹಾನಿ

 

ನೆರಿಯ: ಗ್ರಾಮದ ಅಣಿಯೂರುನಿಂದ ಕಾಟಾಜೆ , ಪರ್ಪಳಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕಳೆದ ಎಪ್ರಿಲ್ ನಿಂದ ನಡೆಯುತ್ತಿದೆ. ಈ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬಗಳು ಸೇರಿದಂತೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕಗಳ ವಿದ್ಯುತ್ ಪೂರೈಕೆ ಕಂಬಗಳು ಇದೆ. ಇಲ್ಲಿ ವಿದ್ಯುತ್ ಕಂಬಗಳ ಬುಡವರೆಗೂ ಗುಡ್ಡ ಕೊರೆದು ಗುತ್ತಿಗೆದಾರರು ಬೇಜವಾಬ್ದಾರಿ ವಹಿಸಿ ರಸ್ತೆ ಕಾಮಗಾರಿ ನಡೆಸಿದ್ದಾರೆ. ವಾರದಿಂದ ಮಳೆ ಸುರಿಯುತ್ತಿದ್ದು, ಕಾಟಾಚಾರದ ಕಾಮಗಾರಿಯಿಂದ ವಿದ್ಯುತ್ ಕಂಬಗಳ ಬುಡದ ಮಣ್ಣು ಸವೆದು ವಿದ್ಯುತ್ ಕಂಬಗಳು ರಸ್ತೆಗೆ ಸಾಲಾಗಿ ಬಿದ್ದಿವೆ. ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ತುರ್ತು ವಾಹನಗಳು ತೆರಳಲೂ ಪರದಾಡುತಾಗಿದೆ. ಗುತ್ತಿಗೆದಾರರ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಯೆನಪೋಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಸೇರಿದ 8 ವಿದ್ಯುತ್ ಕಂಬಗಳು ಸಾಲಾಗಿ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಇಲ್ಲಿ ಇನ್ನಷ್ಟು ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಹೇಳುತ್ತಾರೆ. ಗಾಳಿ ಮಳೆಗೆ ಈ ಪ್ರದೇಶದಲ್ಲಿ ರಬ್ಬರ್, ಅಡಿಕೆ ತೋಟಗಳಿಗೆ ವ್ಯಾಪಕ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಳೆಂಜದಲ್ಲಿ ಮನೆಗಳಿಗೆ ಹಾನಿ: 

ಭಾರೀ ಗಾಳಿ‌ ಮಳೆಗೆ‌ ಕಳೆಂಜ ಗ್ರಾಮದ ಕಾಯರ್ತಡ್ಕ, ಪಾಂಗಾಳ ಬಳಿ ಹಲವು ಮನೆಗಳಿಗೆ ಹಾನಿ‌ಉಂಟಾಗಿದೆ.

error: Content is protected !!