ಭಾರೀ ಗಾಳಿ ಮಳೆಗೆ ಹಾನಿಯಾದ ಮನೆಗಳ ನೆರವಿಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತಿದ್ದು ಕಳೆಂಜ ಗ್ರಾಮದ ಕಾಯರ್ತಡ್ಕ ಸಮೀಪದ ಪಾಂಗಾಳ ಎಂಬಲ್ಲಿ ಬುಧವಾರ ಸುರಿದ ಧಾರಾಕಾರ ಮಳೆ ಹಾಗೂ ಗಾಳಿಗೆ ಸುಮಾರು 8 ಮನೆಗಳು ಹಾನಿಗೊಳಗಾಗಿತ್ತು. ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗಮನಕ್ಕೆ ತಂದಾಗ ತಕ್ಷಣ ಸ್ಪಂದಿಸಿದ‌ ಅವರು, ಬೆಳ್ತಂಗಡಿ ಬಿಜೆಪಿ‌‌ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಹಾಗೂ ತಮ್ಮ ಆಪ್ತ ಕಾರ್ಯದರ್ಶಿ ಮಂಜುನಾಥ್ ಅವರಿಗೆ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.‌ ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ತುರ್ತು ಮನೆ ದುರಸ್ತಿಗೆ ಧನ ಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಕಳೆಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಸನ್ನ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಹರೀಶ್ ಕೆ.ಬಿ, ಗಂಗಾಧರ.ಕೆ, ಮಂಜುನಾಥ, ಶ್ರೀಮತಿ ಲಲಿತಾಕ್ಷಿ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಶಿವಪ್ಪ ಗೌಡ, ನಿರಂಜನ್, ಕಾರ್ಯದರ್ಶಿ ರಾಘವ ಗೌಡ, ಮಹಾಶಕ್ತಿಕೇಂದ್ರ ಸದಸ್ಯರಾದ ಶ್ರೀ ಧನಂಜಯ ಗೌಡ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!