ಮದುವೆ ಕಲ್ಯಾಣ ಮಂಟಪಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿ ಇದೀಗ ಕಡಿಮೆಯಾಗುತ್ತಿದ್ದಂತೆ ಎಲ್ಲವೂ ಅನ್​ಲಾಕ್​​ ಆಗ್ತಿದೆ. ಸದ್ಯ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ರಾಜ್ಯಾದ್ಯಂತ ಚೌಲ್ಟ್ರಿ, ಹಾಲ್, ಹೋಟೆಲ್​ಗಳಲ್ಲಿ ಮದುವೆ ಸಮಾರಂಭಕ್ಕೆ ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೂನ್ 28ರಿಂದ ರಾಜ್ಯಾದ್ಯಂತ ಕೊರೊನಾ ಮುಂಜಾಗ್ರತಾ ಕ್ರಮ ಅನುಸರಿಸಿ ಚೌಲ್ಟ್ರಿ, ಫಂಕ್ಷನ್ ಹಾಲ್, ಹೋಟೆಲ್, ರೆಸಾರ್ಟ್​​ಗಳಲ್ಲಿ ಮದುವೆ ಸಮಾರಂಭ ನಡೆಸಲು ಅನುಮತಿ ನೀಡಲಾಗಿದೆ.ಮದುವೆ ಸಮಾರಂಭಕ್ಕಾಗಿ ಬಿಬಿಎಂಪಿ ಜಂಟಿ ಆಯುಕ್ತರು, ತಹಶೀಲ್ದಾರರು ಅನುಮತಿ ಪಡೆಯಬೇಕು. 40 ಮಂದಿಗೆ ಸೀಮಿತವಾಗಿ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಪಾಸ್ ನೀಡಬೇಕು. ಪಾಸ್ ಇದ್ದವರಿಗೆ ಮಾತ್ರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್​ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕಲ್ಯಾಣ ಮಂಟಪಗಳಲ್ಲೂ ಷರತ್ತುಬದ್ಧ ಅನುಮತಿ ನೀಡಲಾಗಿದೆ.

error: Content is protected !!