ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ ಇದೀಗ ವರ್ತಕರು ಹಾಗೂ ರಿಕ್ಷಾ ಚಾಲಕರ ಆರೋಗ್ಯದ ಕಾಳಜಿಗಾಗಿ ಮಿಡಿದಿದ್ದು, ಸಂಘಟನೆಯ ರೂವಾರಿಗಳಾದ ಉಜಿರೆಯ ಉದ್ಯಮಿ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ರ್ಸ್ ಮಾಲಕ ರಾಜೇಶ್ ಪೈ ಅವರ ನೇತೃತ್ವದಲ್ಲಿ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಮಂಟಪದಲ್ಲಿ 527 ಜನ ವರ್ತಕರು ಹಾಗೂ ರಿಕ್ಷಾ ಚಾಲಕರಿಗೆ ಉಚಿತವಾಗಿ ಲಸಿಕೆ ಹಾಕಿಸುವ ಕಾರ್ಯ ನಡೆಯಿತು.
ಶಾಸಕ ಹರೀಶ್ ಪೂಂಜ ವ್ಯಾಕ್ಸಿನೇಷನ್ ಕಾರ್ಯಕ್ಕೆ ಚಾಲನೆ ನೀಡಿದರು.
ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ಶಾಸಕ ಹರೀಶ್ ಪೂಂಜ ಅವರಿಗೆ ವರ್ತಕರು ಹಾಗೂ ರಿಕ್ಷಾ ಚಾಲಕರಿಗೆ ಲಸಿಕೆ ಹಾಕಿಸುವ ಕುರಿತು ಮನವಿ ಮಾಡಿದ್ದರು. ಶಾಸಕ ಹರೀಶ್ ಪೂಂಜ ಅವರು ಮನವಿಗೆ ಸ್ಪಂದಿಸಿದ್ದಾರೆ.
ವ್ಯಾಕ್ಸಿನೇಷನ್ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ತಾಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು, ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ, ರೋಟರಿ ಕ್ಲಬ್ ನಿಯೋಜಿತ ಕಾರ್ಯದರ್ಶಿ ಅಬೂಬಕ್ಕರ್, ಉಜಿರೆ ವೈದ್ಯಾಧಿಕಾರಿ ಅಕ್ಷತಾರಾಜ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಧನಂಜಯ ರಾವ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.