ಬಾಲಿವುಡ್ ಹಿರಿಯ ನಟ ದಾದ ಸಾಹೇಬ್ ಫಾಲ್ಕೆ ಪುರಸ್ಕೃತ ದಿಲೀಪ್ ಕುಮಾರ್ ಇನ್ನಿಲ್ಲ

ಮುಂಬೈ: ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್ (98) ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಜಲೀಲ್ ಪಾರ್ಕರ್ ತಿಳಿಸಿದ್ದಾರೆ.

ದಿಲೀಪ್ ಕುಮಾರ್ ಅವರು 1922 ಡಿ 22 ರಂದು ಜನಿಸಿದ ಇವರು ಹಿಂದಿ ಚಲನಚಿತ್ರ ರಂಗದ ಅಭಿನೇತೃ. ತಮ್ಮ ಕಾಲದ ಅತಿ ಶ್ರೇಷ್ಠ ನಟರಲ್ಲಿ ಒಬ್ಬರೆಂದು ಅವರನ್ನು ಪರಿಗಣಿಸಲಾಗುತ್ತದೆ. 1944 ರಿಂದ 1996 ರವರೆಗೆ ಸುಮಾರು 62 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಶೋಕರಸ ಪ್ರಧಾನ ಭೂಮಿಕೆಗಳಲ್ಲಿ ಪ್ರಸಿದ್ಧರಾದ ಕಾರಣ ಅವರನ್ನು ದುರಂತ ನಾಯಕನೆಂದೂ ಕರೆಯುತ್ತಾರೆ. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಇವರು ಭಾರತೀಯ ಚಲನಚಿತ್ರ ರಂಗದ ಸರ್ವೋಚ್ಚ ಸನ್ಮಾನವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ. ಅವರು ಭಾರತದ ರಾಜ್ಯಸಭೆಯ ಸದಸ್ಯರೂ ಆಗಿದ್ದರು.

error: Content is protected !!