ಪೆರಿಯಶಾಂತಿ‌: ಬೈಕ್ ಗೆ ಬಸ್ ಢಿಕ್ಕಿ: ಅಪಘಾತದಲ್ಲಿ ಬೈಕ್ ಸವಾರ ಸಾವು

ನೆಲ್ಯಾಡಿ: ಕೆಎಸ್ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.

ಗುಂಡ್ಯದಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಲಾವತ್ತಡ್ಕ ಸಮೀಪ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ಮೇಲೆ ಚಾಲಕ ಬಸ್‌ ನಿಲ್ಲಿಸದೇ ಪರಾರಿಯಾಗಿದ್ದಾನೆ. ತಕ್ಷಣವೇ ಮಾಹಿತಿ ಪಡೆದ ನೆಲ್ಯಾಡಿ ಹೊರ ಠಾಣೆ ಪೊಲೀಸ್ ಸಿಬ್ಬಂದಿಗಳಾದ ಯೋಗರಾಜ್ ಮತ್ತು ಬಾಲಕೃಷ್ಣ ಅವರು ಬಸ್‌ನ ಚಾಲಕನನ್ನ ಗುಂಡ್ಯ ಸಮೀಪ ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ‌.

error: Content is protected !!