ಬಾಲಕಿಯನ್ನು ಕಾರಿನಲ್ಲಿ ಕುಳ್ಳಿರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಯಾರಿಗೂ ತಿಳಿಸದಂತೆ ಜೀವಬೆದರಿಕೆ ಹಾಕಿದ ಆರೋಪ: ಅಪ್ರಾಪ್ತೆಯ ತಂದೆಯಿಂದ ಠಾಣೆಗೆ ದೂರು

ಉಪ್ಪಿನಂಗಡಿ: ಅಪ್ರಾಪ್ತೆಯನ್ನು ಕಾರಿನಲ್ಲಿ ಕುಳ್ಳಿರಿಸಿ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಘಟನೆ ‌ನಡೆದಿದ್ದು, ಉಪ್ಪಿನಂಗಡಿ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ‌

ಬೆಳ್ತಂಗಡಿ ತಾಲೂಕು, ಇಳಂತಿಲ ಗ್ರಾಮದ ಬಾಲಕಿ ಮನೆಗೆ ಯಾರೂ ಇಲ್ಲದ ವೇಳೆ ರುಕ್ಮಯ್ಯ ಮಡಿವಾಳ ಎಂಬಾತ ತನ್ನ ಕಾರಿನಲ್ಲಿ ಹೋಗಿದ್ದಾನೆ. ಬಳಿಕ ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯ ಪಡಿಸಿದ್ದು, ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿ ಉಪ್ಪಿನಂಗಡಿ ಕಡೆಗೆ ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ. ಈ ಸಂದರ್ಭ ಆ ವ್ಯಕ್ತಿ, ಆಕೆಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಹಿಂಸೆ ನೀಡಲು ಪ್ರಯತ್ನ ಪಟ್ಟಿದ್ದಾನೆ, ಬಾಲಕಿ ಭಯಗೊಂಡು ಕಿರುಚಾಡಿದ್ದು ಇದರಿಂದ ವಿಚಲಿತನಾದ ಆತ ಪುನಃ ಮನೆಗೆ ಕೊಂಡು ಹೋಗಿ ಬಿಟ್ಟಿದ್ದಾನೆ. ಬಳಿಕ ಈ ವಿಷಯವನ್ನು ಮನೆಯಲ್ಲಿ ಯಾರಲ್ಲಾದರೂ ಬಾಯಿ ಬಿಟ್ಟರೆ ಕೊಂದು ಹಾಕುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!