ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಎಚ್ .ಎಂ. ಮೊಯ್ದಿನಬ್ಬ ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು 22 ರಂದು ನಿಧನ ಹೊಂದಿದರು.
ಕಳೆದ ಕೆಲವು ದಿನಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದರು ಅದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.
ಬೆಳ್ತಂಗಡಿಯಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತಿದ್ದ ಇವರು 1994 ರಿಂದ 2000 ದವರೆಗೆ ಸುಮಾರು 6 ವರ್ಷಗಳ ಕಾಲ ಲಾಯಿಲ ಪಂಚಾಯತ್ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿರುವುದಲ್ಲದೇ ಲಾಯಿಲ ಮಸೀದಿಯ ಆಡಳಿತ ಮಂಡಳಿಯ ಪದಾಧಿಕಾರಿಯಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಮೃತರು ಪತ್ನಿ, ಅಂಬುಲೆನ್ಸ್ ಹಮೀದ್ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಶ್ರದ್ಧಾಂಜಲಿ
ಲಾಯಿಲ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿದ್ದ ಮೊಯ್ದಿನಬ್ಬ ಅವರ ನಿಧನಕ್ಕೆ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ದಾನ, ಉಪಾಧ್ಯಕ್ಷ ಗಣೇಶ್. ಆರ್. ಗ್ರಾಮ ಪಂಚಾಯತ್ ಸದಸ್ಯರುಗಳು, ಕಾರ್ಯದರ್ಶಿ ಪುಟ್ಟಸ್ವಾಮಿ, ಲೆಕ್ಕ ಸಹಾಯಕಿ ರೇಶ್ಮಾ ಮ ಗಂಜಿಗಟ್ಟಿ ಉಪಸ್ಥಿತರಿದ್ದರು.