ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಅವರು ಇಂದು ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಜಯಂತಿಯನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕನ್ನಡ, ತೆಲುಗು, ತಮಿಳು, ಮರಾಠಿ, ಹಿಂದಿ ಸೇರಿ ಹಲವು ಭಾಷೆಗಳಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಅವರು, ರಾಜ್ಕುಮಾರ್ ಜತೆಯಲ್ಲಿ 45ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ‘ಎಡಕಲ್ಲು ಗುಡ್ಡದ ಮೇಲೆ’ ಮೊದಲಾದ ಪ್ರಸಿದ್ಧ ಚಿತ್ರಗಳಲ್ಲಿ ನಟಿಸಿದ್ದಾರೆ.