ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ?:  ಉದ್ಯಾನ ನಗರಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಬಿಜೆಪಿ ಶಾಸಕಾಂಗ ಸಭೆ ಶೀಘ್ರ ಆರಂಭ, ಹಂಗಾಮಿ‌ ಸಿ.ಎಂ.‌ ಯಡಿಯೂರಪ್ಪ ಆಗಮನ: ‌

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ರಾಜಕೀಯ ‌ಚಟುವಟಿಕೆ ಗರಿಗೆದರಿದೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಲೆಕ್ಕಾಚಾರ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿರುವ ಕ್ಯಾಪಿಟಲ್‌ ಹೋಟೆಲ್‌ಗೆ ಆಗಮಿಸಿದ ಹಂಗಾಮಿ ಸಿಎಂ ಬಿ.ಎಸ್‌.ಯಡಿಯೂರಪ್ಪ. ಸಭೆಗೆ ಹೋಗುವ ಮುನ್ನ ವಿಜಯದ ಸಂಕೇತ ತೋರಿದರು. ಮುಂದಿನ ಸಿಎಂ ಎನ್ನಲಾಗುತ್ತಿರುವ ಗೃಹ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಬಸವರಾಜ ಬೊಮ್ಮಾಯಿ ಅವರೂ ಕೆಕೆ ಗೆಸ್ಟ್‌ ಹೌಸ್‌ಗೆ ಆಗಮಿಸಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಸಭೆಗೆ ಹಾಜರಾಗಿದ್ದಾರೆ.

ರಾಜ್ಯದ ಮುಂದಿನ ಸಿಎಂ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದ್ದು, ಇಂದು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ ಎನ್ನಲಾಗುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೂ ಮೊದಲು ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಂಸದೀಯ ಮಂಡಳಿಯಲ್ಲಿ ನಡೆದಿರುವ ಚರ್ಚೆ ಕುರಿತು ಸಮಾಲೋಚನೆ ನಡೆಸಲಾಗುತ್ತದೆ.

error: Content is protected !!