ನೂತನ ಮುಖ್ಯಮಂತ್ರಿಯವರಿಗೆ ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ನೀಡಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

 

ಬೆಳ್ತಂಗಡಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಅವರು ಬೆಂಗಳೂರಿನಲ್ಲಿ ಬೆಳ್ತಂಗಡಿ ಕ್ಷೇತ್ರದ ಜನತೆಯ ಪರವಾಗಿ ಅಭಿನಂದಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿಯು ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಲು ಆಶೀರ್ವದಿಸಿ ಅನುಗ್ರಹಿಸಲಿ ಎಂದು ಪ್ರಾರ್ಥಿಸಿ ಸ್ವಾಮಿಯ ಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅವರು ಜೊತೆಗಿದ್ದರು.

 

ಪ್ರಬುದ್ಧ ಆಡಳಿತಗಾರ,ಅನುಭವಿ ರಾಜಕಾರಣಿ

 

 

ಪ್ರಬುದ್ಧ ಆಡಳಿತಗಾರ, ಅನುಭವಿ ರಾಜಕಾರಣಿ 30 ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಪ್ರಗತಿಯಾಗಲಿದೆ ಎಂದು ಹರೀಶ್ ಪೂಂಜ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜಲಸಂಪನ್ಮೂಲ, ನೀರಾವರಿ, ಗೃಹ ಸಂಸದೀಯ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿ, ಪ್ರಬುದ್ಧ ಆಡಳಿತಗಾರ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಇದೀಗ ಮುಖ್ಯಮಂತ್ರಿಯಗಿ ಆಯ್ಲೆಯಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಯಶಸ್ವಿ ಆಡಳಿತ ನೀಡುತ್ತಾರೆ ಎಂಬ ವಿಸ್ವಾಸವಿದೆ.
ಬೆಳೆಯುವ ಸಿರಿ ಮೊಳಕೆಯಲ್ಲಿ ಕಂಡ ಎಂಬ ನಾಲ್ನುಡಿಯಂತೆ 2008 ರಲ್ಲಿ ಬೊಮ್ಮಾಯಿ ಅವರನ್ನು ಬಿಜೆಪಿ ಪಕ್ಷಕ್ಕೆ ಕರೆತಂದ ನಾಡಿನ ನಾಯಕರಾಗಿದ್ದ ಯಡಿಯೂರಪ್ಪ ಅವರ ದೂರದೃಷ್ಟಿತ್ವ ಮುಂದಿನ ದಿನಗಳಲ್ಲಿ ಫಲ ನೀಡಲಿದೆ. ಖಂಡಿತವಾಗಿಯೂ ರಾಜ್ಯಕ್ಕೆ, ವಿಶೇಷವಾಗಿ ಬೆಳ್ತಂಗಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ. ಮುಖ್ಯಮಂತ್ರಿಯಾಗಿ ರಾಜ್ಯವನ್ನು ಯಶಸ್ವಿಯಾಗಿ ಮುನ್ನಡೆಸಿದ, ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಿದ ಹಿರಿಯ ಮುತ್ಸದ್ದಿ ಬಿ.ಎಸ್.ಯಡಿಯೂರಪ್ಪ ಅವರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

error: Content is protected !!