ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ.

ಬೆಳ್ತಂಗಡಿ : ಜಿಲ್ಲಾ ಕಾರ್ಮಿಕ ಇಲಾಖೆ ಹಾಗೂ ಲಾಯಿಲ ಗ್ರಾ.ಪಂ. ಸಹಯೋಗದಲ್ಲಿ ಕೋವಿಡ್ 19 ಲಾಕ್‌ಡೌನ್ ಸಮಸ್ಯೆಯಿಂದಾಗಿ ಸಂಕಷ್ಟಕೀಡಾದ ಕಟ್ಟಡ ಮತ್ತು ಇತರ ಕಾರ್ಮಿಕ ವರ್ಗದ ಬಂಧುಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರ ಮಹತ್ವಕಾಂಕ್ಷೆ ಯೋಜನೆಯ ಆಹಾರ ಸಾಮಾಗ್ರಿ ಕಿಟ್ ವಿತರಣೆ ಕಾರ್ಯಕ್ರಮ ಮಂಗಳವಾರ ಲಾಯಿಲ ಗ್ರಾ.ಪಂ. ಸಭಾಭವನದಲ್ಲಿ ಜರಗಿತು.

ಗ್ರಾ.ಪಂ. ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ದಾನ ಅವರು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ವಿಶೇಷ ಮುತುವರ್ಜಿಯಿಂದ ಈ ಕಿಟ್ ವಿತರಣೆಯಾಗುತಿದ್ದು ಪಂಚಾಯತ್ ವತಿಯಿಂದ ಅವರಿಗೆ ಅಭಿನಂದನೆಗಳು ಎಂದರು.

ಗ್ರಾ.ಪಂ.‌ ಕಾರ್ಯದರ್ಶಿ ಪುಟ್ಟಸ್ವಾಮಿ ಸ್ವಾಗತಿಸಿ ಕಟ್ಟಡ ಕಾರ್ಮಿಕ ಇಲಾಖೆಯಿಂದ ಫಲಾನುಭವಿಗಳಿಗೆ ಸಿಗುವ ಸವಲತ್ತುಗಳ ಮಾಹಿತಿಯನ್ನು ನೀಡಿದರು . ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಆರ್. ಸದಸ್ಯರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಂಕೇತಿಕವಾಗಿ ನಡೆದ ಕಾರ್ಯಕ್ರಮದ ನಂತರ ಎಲ್ಲಾ ಕಾರ್ಮಿಕರಿಗೆ ಕರ್ನೊಡಿ ಶಾಲೆಯಲ್ಲಿ ವ್ಯವಸ್ಥಿತ ರೀತಿಯಲ್ಲಿ ಕಿಟ್ ವಿತರಿಸಲಾಯಿತು.

error: Content is protected !!