ದ್ವಿಚಕ್ರ ವಾಹನಗಳ ಡಿಕ್ಕಿ ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ಸ್ ಚಲಿಸಿ ಸ್ಥಳದಲ್ಲೇ ಸಾವು

ಮಂಗಳೂರು: ದ್ವಿ ಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಬಸ್ಸ್ ಚಲಿಸಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಮುಡಿಪು ಸಮೀಪ ನಡೆದಿದೆ.

ಮೃತ ಬೈಕ್ ಸವಾರನನ್ನು ಕಾಸರಗೋಡು ಉಪ್ಪಳ ಮೂಲದ ಜವ್ಹಾರ್(20) ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿಯಾಗಿದ್ದು ಮುಡಿಪು ಸಮೀಪದ ಸಂಬಂಧಿಕರ ಮನೆಗೆಂದು ಬಂದಿದ್ದ ಎಂದು ತಿಳಿದು ಬಂದಿದೆ.

ಮುಡಿಪು ಕಡೆಗೆ ಬರುತ್ತಿದ್ದ ಬೈಕ್ಕ್ ಹಾಗೂ ಎದುರಿನಿಂದ ಬಂದ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಹಿಂಬದಿಯಿಂದ ಬಂದ ಬಸ್ ಆತನ ಮೇಲೆ ಚಲಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಸ್ಕೂಟರ್ ಸವಾರರಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಬಗ್ಗೆ ಘಟನಾ ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!