ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕೆ.ಎಸ್.ಅರ್.ಟಿ.ಸಿ. ಬಸ್!: ಬೈಕ್ ನಡುವೆ ಅಪಘಾತ ತಪ್ಪಿಸಲು ಹೋಗಿ ದುರಂತ: ಶಿವಮೊಗ್ಗ, ಸಾಗರದ ಕಾಸ್ಪಾಡಿ ಕೆರೆ ಬಳಿ ಘಟನೆ.

 

 

ಸಾಗರ: ಬೈಕ್​ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕೆಎಸ್​ಆರ್​ಟಿಸಿ ಬಸ್ಸೊಂದು ಕೆರೆಗೆ ಉರುಳಿದ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ನಡೆದಿದೆ.
ಸಾಗರದಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಕಾಸ್ಪಾಡಿ ಗ್ರಾಮದ ಕೆರೆಯ ಸಮೀಪ ಏಕಾಏಕಿ ಬೈಕ್​ ಅಡ್ಡಬಂದಿದೆ. ಅಪಘಾತ ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ವೇಳೆ, ಬಸ್​ನಲ್ಲಿದ್ದ 28 ಪ್ರಯಾಣಿಕರ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಅಪಾಯದಿಂದ ಪಾರಾಗಿದ್ದಾರೆ.ಗಾಯಾಳುಗಳನ್ನು ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ . ಅಪಘಾತ ಸಂದರ್ಭ ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು  . ಸ್ಥಳಕ್ಕೆ‌ ಸಾಗರ ಡಿವೈಎಸ್​ಪಿ ವಿನಾಯಕ್ ಭೇಟಿ ನೀಡಿ‌, ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!