ಕೋವಿಡ್-19 ಹಿನ್ನಲೆ ಸರಕಾರದ ಆದೇಶ: ಆಗಸ್ಟ್ 5 ರಿಂದ 15 ರ ವರೆಗೆ  ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ:  ವಾರಾಂತ್ಯ(ಶನಿವಾರ-ಭಾನುವಾರ) ದೇವರ ದರ್ಶನಕ್ಕೆ ನಿರ್ಬಂಧ: ಭಕ್ತಾಧಿಗಳು ಸಹಕರಿಸುವಂತೆ ಧರ್ಮಸ್ಥಳ ಕ್ಷೇತ್ರದಿಂದ ಪ್ರಕಟಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ

ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಗಸ್ಟ್ 05 ರಿಂದ 15 ರ ವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೂ ವಾರಾಂತ್ಯದಲ್ಲಿ (ಶನಿವಾರ/ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದೆ.

ಭಕ್ತಾದಿಗಳೆಲ್ಲರೂ ಸಹಕರಿಸುವಂತೆ ವಿನಂತಿಸುತ್ತೇವೆ. ಎಂದು  ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ  ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!