ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನೈಟ್, ವಾರಾಂತ್ಯ ಕರ್ಪ್ಯೂ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ: ಆ. 23ರಿಂದ ಒಂಬತ್ತು, ಹತ್ತನೇ ತರಗತಿಗಳ ಆರಂಭಕ್ಕೆ ನಿರ್ಧಾರ, ಎರಡು ದಿನಕ್ಕೊಮ್ಮೆ ತರಗತಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು ರಾಜ್ಯದ ಗಡಿ ಜಿಲ್ಲೆಗಳಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನೈಟ್ ಕರ್ಫ್ಯೂ 10ರ ಬದಲು 9 ಗಂಟೆಯಿಂದಲೇ ಆರಂಭವಾಗಲಿದೆ. ಕೋವಿಡ್ ನಿಯಂತ್ರಣ ದೃಷ್ಟಿಯಿಂದ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು ಎಂದರು.

ಆ. 23ರಿಂದ ಒಂಬತ್ತು ಮತ್ತು‌ ಹತ್ತನೇ ತರಗತಿಗಳ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ. ದಿನಬಿಟ್ಟು ದಿನ ತರಗತಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದರು. ‌

error: Content is protected !!