ಟೋಕಿಯೋ: ಭಾರತದ ನೀರಜ್ ಚೋಪ್ರಾ ಜಾವಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದು
ಇತಿಹಾಸ ನಿರ್ಮಿಸಿದ್ದಾರೆ.
23 ವರ್ಷದ ನೀರಜ್ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಹಾಗೂ ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಎಸೆದರು. ಆದರೆ ಮೂರನೇ ಪ್ರಯತ್ನ 76.79 ಮೀ.ಗಿಂತ ಕಡಿಮೆ ಎಸೆದಿದ್ದರು. ಇನ್ನು ಎರಡನೇ ಪ್ರಯತ್ನದಲ್ಲಿ ಎಲ್ಲರಿಗಿಂತಲೂ ಹೆಚ್ಚು ದೂರ ಭರ್ಚಿಯನ್ನು ಏಸೆದಿದ್ದರಿಂದ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.ಜಪಾನ್ನ ಟೋಕಿಯೋದಲ್ಲಿ 23 ವರ್ಷದ ನೀರಜ್ ಚೋಪ್ರಾ 87.58 ಮೀಟರ್ ದೂರ ಎಸೆದು, ದಿಗ್ಗಜರನ್ನೇ ಮೀರಿಸಿದ್ದು, ಈ ಮೂಲಕ ಹೊಸ ರೆಕಾರ್ಡ್ ಬರೆದಿದ್ದಾರೆ.ಈ ಹಿಂದೆ 88.07 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಹೊಸ ದಾಖಲೆ ಬರೆದಿದ್ದರು. 2018ರ ಏಷ್ಯನ್ ಗೇಮ್ಸ್ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದರು.