ಬೆಳ್ತಂಗಡಿ: ಜಾವಲೀನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಈಗಾಗಲೇ ರಾಷ್ಟ್ರಪತಿ ಪ್ರಧಾನಿ ಸೇರಿದಂತೆ ಹಲವಾರು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ ಬಹುಮಾನಗಳ ಸುರಿಮಳೆಯಾಗುತ್ತಿದೆ.
ಅದೇ ರೀತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೂಡ ಬಂಪರ್ ಕೊಡುಗೆಯನ್ನು ಘೋಷಿಸಿದೆ. ಕೆ.ಎಸ್.ಆರ್.ಟಿ.ಸಿಯು 60 ವರ್ಷ ಪೊರೈಸಿರುವ ಸವಿನೆನಪಿನಲ್ಲಿ ನೀರಜ್ ಚೋಪ್ರಾ ಅವರಿಗೆ ಕೆಎಸ್ ಆರ್ ಟಿಸಿ ಗೋಲ್ಡನ್ ಪಾಸ್ ನೀಡಲಾಗುವುದು. ಅವರಿಗೆ ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತರ್ ರಾಜ್ಯ ಬಸ್ಸ್ ಗಳಲ್ಲಿ ಜೀವಿತಾವಧಿವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೆಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.