ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಕೊರೊನಾ ಸೋಂಕು ಕಾರಣಕ್ಕೆ 20-21ನೇ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಸರ್ಕಾರ ಸಂದಿಗ್ಥತೆಗೆ ಸಿಲುಕಿತ್ತು ಅದರೂ ಜುಲೈ 19,22 ರಂದು ಎರಡು ದಿನಗಳಲ್ಲಿ ಪರೀಕ್ಷೆ ನಡೆಸಿ ಇದೀಗ ಭವಿಷ್ಯದ ಪರೀಕ್ಷೆ ಬರೆದಿದ್ದ ವಿಧ್ಯಾರ್ಥಿಗಳಿಗೆ ಫಲ ಸಿಗುವ ಸಮಯ ಬಂದಿದೆ.

ನಾಳೆ ರಾಜ್ಯದ ನೂತನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ನಾಗೇಶ್ ಫಲಿತಾಂಶ ಪ್ರಕಟಿಸಲಿದ್ದಾರೆ.ಈ ಸಲದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಒಟ್ಟಾರೆ ಹಾಜರಾತಿ 96.65% ರಷ್ಟು ಇತ್ತು. ಕಳೆದ ವಾರ್ಷಿಕ ಪರೀಕ್ಷೆಗಿಂತ ಹೆಚ್ಚು ಮಕ್ಕಳು ಈ ಸಲ ಹಾಜರಾಗಿದ್ದರು.

ಇದೀಗ 8 ಲಕ್ಷಕ್ಕೂ ಅಧಿಕ ಮಕ್ಕಳ ಫಲಿತಾಂಶ ನಾಳೆ ಹೊರಬೀಳಲಿದೆ.‌‌ ವಿದ್ಯಾರ್ಥಿಗಳು ಎಸ್ಎಂಎಸ್ ಮೂಲಕವೂ ತಮ್ಮ ಫಲಿತಾಂಶ ಪಡೆಯಬಹುದಾಗಿದೆ.

error: Content is protected !!