ಲಾಯಿಲ ಪ್ರಸನ್ನ ಕಾಲೇಜ್ ಸೀಲ್ ಡೌನ್

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತಿದ್ದುಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪ್ರಸನ್ನ ಕಾಲೇಜ್ ನ ಹಾಸ್ಟೆಲ್ ನಲ್ಲಿ ಇರುವ 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ಸೋಂಕು ಪತ್ತೆಯಾದ ಎಲ್ಲ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದ್ದು ಇನ್ನುಳಿದ ವಿದ್ಯಾರ್ಥಿಗಳ ಗಂಟಲ ದ್ರವ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

error: Content is protected !!