ಧರ್ಮಸ್ಥಳ: ರಾಜ್ಯ ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ ಟಿ ಬಿ ನಾಗರಾಜ್ ಮತ್ತು ಕುಟುಂಬದವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ಹಾಸನದಿಂದ ಕಾರಿನ ಮೂಲಕ ಧರ್ಮಸ್ಥಳಕ್ಕೆ ಆಗಮಿಸಿದ ಸಚಿವ ಎಂ ಟಿ ಬಿ ನಾಗರಾಜ್ ಮತ್ತು ಕುಟುಂಬಸ್ಥರು ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೆಂದ್ರ ಹೆಗ್ಗಡೆಯವರ ಭೇಟಿ ಮಾಡಿ, ಆಶೀರ್ವಾದ ಪಡೆದರು. ಕ್ಷೇತ್ರದ ವತಿಯಿಂದ ಸಚಿವರನ್ನು ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಗೌರವಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬೆಳ್ತಂಗಡಿ ಜನತೆಯ ಪರವಾಗಿ ಸ್ವಾಗತಿಸಿದರು. ಕ್ಷೇತ್ರದ ಪರವಾಗಿ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಹಾಗೂ ದೇವಳ ಕಚೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್ ಸ್ವಾಗತಿಸಿದರು.
ಸಚಿವರ ಪತ್ನಿ ಶಾಂತಕುಮಾರಿ, ಸುಬ್ರಮಣ್ಯ ಗುಂಜೂರು, ಶೋಭಾ ಕುಮಾರಿ, ಜಿಂಗಪ್ಪ, ಬೆಳ್ತಂಗಡಿ ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಸದಸ್ಯರಾದ ಶರತ್ ಕುಮಾರ್, ಅಂಬರೀಶ್, ಲೋಕೇಶ್ ಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ., ಪ.ಪಂ.ಮುಖ್ಯಾಧಿಕಾರಿ ಸುಧಾಕರ್ ಎಂ.ಎಚ್., ಎಂಜಿನಿಯರ್ ಮಹಾವೀರ ಅರಿಗ ಮೊದಲಾದವರು ಇದ್ದರು.