ಮನೆ ಗೋಡೆಯಲ್ಲಿ ಕೊರೊನಾ ಜಾಗೃತಿ ಬರಹ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಮೆಚ್ಚುಗೆ

 

ಬೆಳ್ತಂಗಡಿ: ಲಾಯಿಲ ಗ್ರಾಮ‌‌ ಪಂಚಾಯತ್ ವ್ಯಾಪ್ತಿಯ ರಾಘವೇಂದ್ರ ನಗರದ ಮಾದರಿ ಗ್ರಾಮ ವಿಕಾಸ ಪ್ರೇರಕಿ ಯಶೋದಾ ಅವರು ತನ್ನ ಮನೆಯ ಗೋಡೆಯಲ್ಲಿ ಕೊರೊನಾ ಜಾಗೃತಿ ಬರಹ ಮತ್ತು ಚಿತ್ರಗಳನ್ನು ಬಿಡಿಸಿ ಎಲ್ಲರಿಗೂ ಕೊರೊನಾ ಜಾಗೃತಿಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಮಾಡಿದ್ದರು.

 

 

 

ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಅವರು ಸೆ 18 ರಂದು ಲಾಯಿಲ ಗ್ರಾಮ ಪಂಚಾಯತ್ ವಾರ್ಷಿಕ ಜಮಾಬಂಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರ ಮನೆಗೆ ಭೇಟಿ ನೀಡಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿ ಇಂತಹ ಜಾಗೃತಿ ಬರಹಗಳನ್ನು ಗೋಡೆಗಳ ಮೇಲೆ ಬರೆಯಿಸಿ ಜನರಿಗೆ ಜಾಗೃತಿ ಮೂಡಿಸುವಂತಹ ಯಶೋಧಾರವರ ಕೆಲಸ ಅಭಿನಂದನೀಯ ಇವರ ಇಂತಹ ಉತ್ತಮ ಕೆಲಸಗಳು ಇತರರಿಗೂ ಪ್ರೇರಣೆಯಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

 

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಬೆನಡಿಕ್ಟ ಸಲ್ಡಾನ, ತಾ ಪಂ ಕಾರ್ಯನಿರ್ವಾಹಣಾಧಿಕಾರಿ ಕುಸಮಾಧರ್,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಸದಸ್ಯರಾದ ಅರವಿಂದ ಲಾಯಿಲ,  ಪ್ರಸಾದ್ ಶೆಟ್ಟಿ ಎಣಿಂಜೆ, ನೀರು ಮತ್ತು ನೈರ್ಮಲ್ಯ ಸಮಿತಿ ಉಪಾಧ್ಯಕ್ಷ ಲಕ್ಷ್ಮಣ ಪೂಜಾರಿ,ಜಯಾನಂದ ಲಾಯಿಲ, ಕಾರ್ಯದರ್ಶಿ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

 

error: Content is protected !!