ಪತ್ನಿ ಆತ್ಮಹತ್ಯೆಗೆ ಸ್ಥಳೀಯ ನಿವಾಸಿಯ ಕಿರುಕುಳವೇ ಕಾರಣ ಗಂಡನಿಂದ ದೂರು. ಕುಂಠಿನಿ ಬಳಿ ಗೃಹಿಣಿ ಆತ್ಮಹತ್ಯೆ ಪ್ರಕರಣ.

 

 

 

 

 

ಬೆಳ್ತಂಗಡಿ: ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಪತ್ನಿಯ ಆತ್ಮಹತ್ಯೆಗೆ ಸ್ಥಳೀಯ ನಿವಾಸಿಯ ಕಿರುಕುಳವೇ ಕಾರಣ ಎಂದು ಗಂಡ ಬೆಳ್ತಂಗಡಿ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.

ಕುವೆಟ್ಟು ಗ್ರಾಮದ ಆದಂ ಎಂಬವರ ಪತ್ನಿ ಅಸ್ಮ ಎಂಬವರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಆದಂ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಅಸ್ಮರವರು ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದರು. ಸೆ.8 ರಂದು ಈಕೆ ಮನೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೆ.9 ರಂದು  ಮೃತಪಟ್ಟಿದ್ದರು.

ವಿಚಾರ ತಿಳಿದು ಊರಿಗೆ ಮರಳಿದ ಪತಿ ಆದಂರವರು ಸ್ಥಳೀಯ ನಿವಾಸಿಯೊಬ್ಬರ ಮಾನಸಿಕ ಕಿರುಕುಳದಿಂದ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

error: Content is protected !!